Index   ವಚನ - 288    Search  
 
ವಾಮಭಾಗದಲೊಂದು ಶಿಶು ಹುಟ್ಟಿತ್ತ ಕಂಡೆ. `ಜೋ ಜೋ' ಎಂದು ಜೋಗುಳವಾಡಿತ್ತ ಕಂಡೆ. ಜೋಗುಳವಾಡಿದ ಶಿಶು ಅಲ್ಲಿಯೆ ಲಯವಾಯಿತ್ತು. ಗುಹೇಶ್ವರನೆಂಬ ಶಬ್ದ ಅಲ್ಲಿಯೆ ಲಯವಾಯಿತ್ತು!