ವಚನ - 289     
 
ಬ್ರಹ್ಮ ವಿಷ್ಣುವ ನುಂಗಿ, ವಿಷ್ಣು ಬ್ರಹ್ಮನ ನುಂಗಿ, ಬ್ರಹ್ಮಾಂಡದೊಳಡಗಿ, ಶತಪತ್ರ ಸಹಸ್ರದಳಂಗಳ ಮೀರಿ, ಚಿತ್ರಗುಪ್ತರ ಕೈಯ ಪತ್ರವ ನಿಲಿಸಿತ್ತು ಗುಹೇಶ್ವರನೆಂಬ ಲಿಂಗೈಕ್ಯದ ನಿಲವು.