Index   ವಚನ - 6    Search  
 
ಪತಿಯಾಜ್ಞೆಯಲ್ಲಿ ಚರಿಪ ಸತಿಗ್ಯಾಕೆ ಪ್ರತಿಜ್ಞೆಯು ? ಪ್ರತಿಜ್ಞೆಯ ಪತಿಕರದಲ್ಲಿ ಪೋಪದಿರೆ ಯಾತನೆಯಲ್ಲವೆ ? ಇವಳ ಲಿಂಗನಿಷ್ಠೆ ಇವಳಿಗೆ, ನಮ್ಮ ನಿಷ್ಠೆ ಪತಿಯಾಜ್ಞೆಯಲ್ಲಿ ಕಾಣಾ ಗಂಗಾಪ್ರಿಯ ಕೂಡಲಸಂಗಮದೇವಾ.