Index   ವಚನ - 9    Search  
 
ಸಾಂದ್ರವಾಗಿ ಹರಗಣಭಕ್ತಿಯ ಮಾಳ್ಪನೆಂತೊ ಮಾದಲಾಂಬಿಕಾನಂದನನು ? ಸಾಂದ್ರವಾಗಿ ಬಿಜ್ಜಳನರಮನೆಯ ನ್ಯಾಯ ನೋಳ್ಪನೆಂತೊ ಮಾದರಸನ ಮೋಹದ ಮಗನು ? ಸಾಂದ್ರವಾಗಿ ಲಿಂಗಾರ್ಚನೆ ಲಿಂಗತೃಪ್ತಿ ಅನುಗೆಯ್ವನೆಂತೊ ಗಂಗಾಪ್ರಿಯ ಕೂಡಲಸಂಗನ ಶರಣ ಚೆನ್ನ.