Index   ವಚನ - 2    Search  
 
ಭಕ್ತನಾದಡೆ ಬಸವಣ್ಣನಂತಾಗಬೇಕು. ಜಂಗಮವಾದಡೆ ಪ್ರಭುದೇವರಂತಾಗಬೇಕು. ಯೋಗಿಯಾದಡೆ ಸಿದ್ಧರಾಮಯ್ಯನಂತಾಗಬೇಕು. ಭೋಗಿಯಾದಡೆ ಚೆನ್ನಬಸವಣ್ಣನಂತಾಗಬೇಕು. ಐಕ್ಯನಾದಡೆ ಅಜಗಣ್ಣನಂತಾಗಬೇಕು. ಇಂತಿವರ ಕಾರುಣ್ಯ ಪ್ರಸಾದವ ಕೊಂಡು ಸತ್ತಹಾಗಿರಬೇಕಲ್ಲದೆ ತತ್ವದ ಮಾತು ಎನಗೇಕಯ್ಯಾ ದಾಸಯ್ಯಪ್ರಿಯ ರಾಮನಾಥಾ?