Index   ವಚನ - 3    Search  
 
ಇನ್ನು ಅರಿದ ಬಳಿಕ ಬರಲುಂಟೆ? ಹೃದಯಕಮಲ ಮಧ್ಯದಲ್ಲಿ ನಿಜವು ನೆಲೆಗೊಂಡ ಬಳಿಕ, ಪುಣ್ಯಪಾಪವೆಂಬುದಕ್ಕೆ ಹೊರಗಾದೆನು. ಭುವನ ಹದಿನಾಲ್ಕರೊಳಗೆ ಪರಿಪೂರ್ಣ ನಿರಂಜನ ಜ್ಯೋತಿಯಾಗಿ ಬೆಳಗುವ ಪ್ರಭುವ ಕಂಡು ಬದುಕಿದೆನು ಕಾಣಾ ಬಸವಣ್ಣಪ್ರಿಯ ಚೆನ್ನಸಂಗಯ್ಯಾ.