Index   ವಚನ - 1    Search  
 
ಅಂತಾಯಿತ್ತಿಂತಾಯಿತ್ತೆಂತಾಯಿತ್ತೆನಬೇಡ, ಅನಂತನಿಂತಾತನೆಂದರಿಯಾ ಬಿಡಾಡಿ. ಕರೆದಡೆ ಓ ಎಂಬುದು ನಾದವೊ ಬಿಂದುವೊ ಪ್ರಾಣವೊ ಇದಾವುದು ? ಬಲ್ಲಡೆ ನೀ ಹೇಳಾ, ಬಿಡಾಡಿ. ನಾಲ್ಕು ವೇದ, ಹದಿನಾರು ಶಾಸ್ತ್ರ, ಹದಿನೆಂಟು ಪುರಾಣ, ಇಪ್ಪತ್ತೆಂಟಾಗಮ ಇದಪ್ರತಿ ಬಿಡಾಡಿ. ಶಬ್ದವೆ ಬ್ರಹ್ಮ, ಶಬ್ದವೆ ಸಿದ್ಧ, ಶಬ್ದವೆ ಶುದ್ಧ ಕಾಣಿರೆ, ಬಿಡಾಡಿ.