Index   ವಚನ - 1    Search  
 
ಅಂಗದ ಮೇಲೆ ಲಿಂಗಸಂಬಂಧಿಯಾಗಲು ಸಾಲೋಕ್ಯವೆಂದರೇನೋ? ಗುರುಲಿಂಗಜಂಗಮಸನ್ನಿಧಿ ದಾಸೋಹದೊಳಗಿರಲು ಸಾಮೀಪ್ಯವೆಂದರೇನೋ? ಸರ್ವಾಂಗಮನ ಇಂದ್ರಿಯಂಗಳ ಸಂಗದೊಳಗಿರಲು ಸಾರೂಪ್ಯವೆಂದರೇನೊ? ಚತುರ್ದಶಭುವನಂಗಳನೊಳಕೊಂಡ ಮಹಾಘನಲಿಂಗವು ತನ್ನ ಮನದೊಳಗವಗವಿಸಿ ನೆನವುತ್ತಿರಲು ಸಾಯುಜ್ಯವೆಂದರೇನೊ? ಇಂತೀ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯವೆಂಬ ಚತುರ್ವಿಧಪದಂಗಳೆಂದರೇನೊ? ಎಲೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ, ನಿಮ್ಮನರಿದ ಶರಣಂಗೆ.