Index   ವಚನ - 58    Search  
 
ಇಷ್ಟಲಿಂಗಕ್ಕೆ ಕಾಯದ ಕೈಯಿಂದ ಮುಟ್ಟಿ ಅಷ್ಟವಿಧಾರ್ಚನೆ, ಷೋಡಶೋಪಚಾರ ಮೈದೋರಿದಲ್ಲದೆ ಆಕಾರನಾಸ್ತಿಯಾಗದು. ಬೆರಣಿಯಲ್ಲಿ ಅಗ್ನಿ ಮೈದೋರದಿದ್ದಡೆ ಆಕಾರನಾಸ್ತಿಯಾಗದು. ಲಿಂಗದಲ್ಲಿದ್ದ ಜವನಿಕೆ ಬಗೆದೆಗೆದಡೆ ಕಾಯವಿಲ್ಲದೆ ಪ್ರಾಣದ ಪರಿ ನಷ್ಟ, ಜ್ಞಾನಾಗ್ನಿಯಿಂದ ಭೋಗ ನಷ್ಟ. ಇದು ಕಾರಣ, ನಿಮ್ಮ ಶರಣರ ಮರ್ತ್ಯರೆಂದಡೆ ನರಕ ತಪ್ಪದು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.