Index   ವಚನ - 71    Search  
 
ಎನ್ನ ಸರ್ವಾಂಗದಲ್ಲಿ ಲಿಂಗವೈದಾನೆ, ಐದಾನೆ, ಎನ್ನ ಮನವನರಿಯದೆ ಕೆಟ್ಟೆ ಕೆಟ್ಟೆನಯ್ಯಾ. ಎನ್ನ ಅಂತರಂಗ ಬಹಿರಂಗದಲ್ಲಿ ಲಿಂಗವೈದಾನೆ, ಮನವನರಿಯದೆ ಕೆಟ್ಟೆ ಕೆಟ್ಟೆ. ವಿಶ್ವಾಸದಿಂ ಗ್ರಹಿಸಲೊಲ್ಲದೆ ಕೆಟ್ಟೆ ಕೆಟ್ಟೆನಯ್ಯಾ. ಈ ಮನ ವಿಶ್ವಾಸದಿಂದ ಗ್ರಹಿಸಿದಡೆ ಸತ್ಯನಹೆ ನಿತ್ಯನಹೆ ಮುಕ್ತನಹೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.