Index   ವಚನ - 72    Search  
 
ಎನ್ನೊಳಗೆ ನೀನು ಪ್ರವೇಶ, ನಿನ್ನೊಳಗೆ ನಾನು ಪ್ರವೇಶ, ದೇವ ನೀನಿಲ್ಲದಿಲ್ಲ, ಭಕ್ತ ನಾನಲ್ಲದಿಲ್ಲ. ಈ ಪರಿಯ ಮಾಡುವರಿನ್ನಾರು ಹೇಳಾ? ಎನಗೆ ನೀನೇ ಗತಿ, ನಿನಗೆ ನಾನೇ ಗತಿ ಇನ್ನೇಕೆ ಜವನಿಕೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.