Index   ವಚನ - 87    Search  
 
ಓಂ ನಮಃ ಶಿವಾಯ ಎಂಬುದೆ ವೇದ, ಓಂ ನಮಃ ಶಿವಾಯ ಎಂಬುದೆ ಶಾಸ್ತ್ರ, ಓಂ ನಮಃ ಶಿವಾಯ ಎಂಬುದೆ ಪುರಾಣ, ಓಂ ನಮಃ ಶಿವಾಯ ಎಂಬುದೆ ಆಗಮ, ಓಂ ನಮಃ ಶಿವಾಯ ಎಂಬುದೆ ಸಕಲಕಲೆ. ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎಂದೆನಲು ಸರ್ವಜ್ಞ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.