Index   ವಚನ - 104    Search  
 
ಗುರುಲಿಂಗ ಪರಂಜ್ಯೋತಿರ್ಲಿಂಗವೆಂದರಿದವನು ಬಲ್ಲವನು, ಗುರುಲಿಂಗ ಪ್ರಾಣ ಏಕೀಭವಿಸಿದ ಲಿಂಗ, ಪರಂಜ್ಯೋತಿರ್ಲಿಂಗವೆಂದರಿದವನು ಬಲ್ಲವನು. ಈ ಮಹಾವಸ್ತುಗಳನರಿಯದವನು ಅರಿಯದವನು. ಈ ಮಹಾವಸ್ತುಗಳನರಿಯದವರನು ಅರಿದವನು ಅರಿಯದವನು, ಅರಿಯದವಂಗೆ ಪೂಜೆ ಎಂತಕ್ಕು? ಪೂಜೆ ಇಲ್ಲದವಂಗೆ ಭಕ್ತಿಯಿಲ್ಲ, ಭಕ್ತಿ ಇಲ್ಲದವಂಗೆ ಗುರುಲಿಂಗಜಂಗಮಪ್ರಸನ್ನವೆಂತಪ್ಪುದು? ಪ್ರಸನ್ನತೆಯ ಹಡೆಯದವಂಗೆ ಪ್ರಸಾದವಿಲ್ಲ, ಪ್ರಸಾದ ಪ್ರಸನ್ನತೆಯ ಹಡೆಯದವಂಗೆ ಮುಕ್ತಿ ಎಂತೂ ಇಲ್ಲ. ಇದನರಿದರಿವುದು, ಪ್ರಸನ್ನತೆಯಪ್ಪಂತೆ ನಡೆವುದು, ಪ್ರಸಾದವ ಹಡೆವುದು, ಭೋಗಿಸಿ ಮುಕ್ತರಪ್ಪುದಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.