ವಚನ - 307     
 
ಅಂತರಂಗ ಸನ್ನಿಹಿತ, ಬಹಿರಂಗ ನಿಶ್ಚಿಂತವೊ ಅಯ್ಯಾ. ತನು ತನ್ನ ಸುಖ, ಮನ ಪರಮ ಸುಖವೊ, ಅದು ಕಾರಣ ಕಾಯ ವಾಯವೊ, ಗುಹೇಶ್ವರ ನಿರಾಳವೊ ಅಯ್ಯಾ.