Index   ವಚನ - 179    Search  
 
ಪೃಥ್ವಿ ಅಂಗ, ಚಿತ್ತ ಹಸ್ತ, ನಾಸಿಕ ಮುಖ, ಗಂಧ ಪದಾರ್ಥ, ಆಚಾರಲಿಂಗಕರ್ಪಿತ ಭಕ್ತ. ಅಪ್ಪು ಅಂಗ, ಬುದ್ಧಿ ಹಸ್ತ, ಜಿಹ್ವೆ ಮುಖ, ರುಚಿ ಪದಾರ್ಥ, ಗುರುಲಿಂಗಕರ್ಪಿತ ಮಹೇಶ್ವರ. ಅನಿಲ ಅಂಗ, ನಿರಹಂಕಾರ ಹಸ್ತ, ನೇತ್ರ ಮುಖ, ರೂಪು ಪದಾರ್ಥ, ಶಿವಲಿಂಗಕರ್ಪಿತ ಪ್ರಸಾದಿ. ಪವನ ಅಂಗ, ಮನ ಹಸ್ತ, ತ್ವಕ್ಕು ಮುಖ, ಸ್ಪರ್ಶ ಪದಾರ್ಥ, ಜಂಗಮಲಿಂಗಕರ್ಪಿತ ಪ್ರಾಣಲಿಂಗಿ. ವ್ಯೋಮ ಅಂಗ, ಜ್ಞಾನ ಹಸ್ತ, ಶ್ರೋತ್ರ ಮುಖ, ಶಬ್ದ ಪದಾರ್ಥ, ಪ್ರಸಾದಲಿಂಗಕರ್ಪಿತ ಶರಣ. ಹೃದಯ ಅಂಗ, ಭಾವ ಹಸ್ತ, ಅರ್ಥ ಮುಖ, ಪರಿಣಾಮ ಪದಾರ್ಥ, ಮಹಾಲಿಂಗಕರ್ಪಿತ ಐಕ್ಯ. ಇಂತೀ ಷಟ್‍ಸ್ಥಲವಳವಟ್ಟಾತನು ಪರಶಕ್ತಿಸ್ವರೂಪನು, ಆತನು ನಿಜಶಿವಯೋಗಸಂಪನ್ನನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.