Index   ವಚನ - 235    Search  
 
ಲಿಂಗಪ್ರಸಾದವಂ ಚೆಲ್ಲಿ, ಜಂಗಮಪ್ರಸಾದದ ಸುಯಿಧಾನಿಯೆಂಬ ಅಂಗಹೀನ ಮೂಕೊರೆಯ ಹೊಲೆಯನ ಮುಖವ ನೋಡಲಾಗದು! ಅದೇನು ಕಾರಣವೆಂದಡೆ : ಗುರುವಾವುದು? ಲಿಂಗವಾವುದು? ಜಂಗಮವಾವುದು? ಇಂತೀ ತ್ರಿವಿಧವು ಒಂದಾದ ಕಾರಣ 'ಏಕಮೂರ್ತಿಸ್ತ್ರಯೋ ಭಾಗಃ ಗುರುಲಿಂಗಂತು ಜಂಗಮಃ ಜಂಗಮಶ್ಚ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ' ಎಂದುದಾಗಿ, ಒಂದಬಿಟ್ಟೊಂದ ಹಿಡಿದ ಸಂದೇಹಿ ಹೊಲೆಯನ ಕಂಡರೆ ಹಂದಿ ನಾಯ ಬಸುರಲ್ಲಿ ಹಾಕದೆ ಬಿಡುವನೇ? ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.