Index   ವಚನ - 237    Search  
 
ಲಿಂಗ ಪ್ರಾಣ, ಪ್ರಾಣ ಲಿಂಗ, ಆ ಮಹಾಲಿಂಗಕ್ಕೆ ಕಾಯವೆ ಭಕ್ತನು, `ಭಕ್ತಕಾಯ ಮಮಕಾಯ' ಎಂದುದಾಗಿ ಆ ಪ್ರಾಣ ಲಿಂಗವು, ಕಾಯ ಭಕ್ತನು ಆ ಲಿಂಗಕ್ಕೆ ಆ ಭಕ್ತನು ದಾಸೋಹವ ಮಾಡಿದಡೆ ಭಿನ್ನ ಭೇದವೆ? ಅಲ್ಲ, ಸ್ವಭಾವ ನೈಜ. ಅಂಗಕ್ರೀಯೆಲ್ಲ ಲಿಂಗಕ್ರೀ, ಲಿಂಗಕ್ರೀಯೆಲ್ಲ ಅಂಗಕ್ರೀ. ಕೈಕಲಸಿದಡೆ ಬಾಯಿಗೆ, ಹಾಂಗೆ ಸರ್ವಾಂಗ ಲಿಂಗಕ್ಕೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.