ವಚನ - 320     
 
ಒಳಗೆ ನೋಡಿಹೆನೆಂದಡೆ ಒಳಗ ನೋಡಲಿಲ್ಲ. ಹೊರಗೆ ನೋಡಿಹೆನೆಂದಡೆ ಹೊರಗ ನೋಡಲಿಲ್ಲ. ಜ್ಞಾನವೆಂತುಟೊ? ಅಜ್ಞಾನವೆಂತುಟೊ? ಬಲೆಯ ಬೀಸಿ ಕೊಲುವನ ಮನೆಯಲ್ಲಿ ಸತ್ತಡೆ ಏನು ಕಾರಣ ಅಳುವರೊ ಗುಹೇಶ್ವರಾ?