Index   ವಚನ - 247    Search  
 
ಲಿಂಗವಂತ ಲಿಂಗವಂತ ಎಂಬಿರಿ, ಎಂತು ಲಿಂಗವಂತರಾದಿರೋ, ಅನ್ಯದೈವದ ಭಜನೆ ಮಾಣದನ್ನಕ್ಕ? ಭವಿಗಳ ಸಂಗವ ಮಾಣದನ್ನಕ್ಕ, ಎಂತು ಲಿಂಗವಂತರಾದಿರೋ ನೀವು? ಅದೆಂತೆಂದಡೆ, ಶಿವಾಚಾರಸಮಾಯುಕ್ತಃ ಅನ್ಯದೈವಸ್ಯ ಪೂಜನಾತ್ ಶ್ವಾನಯೋನಿಶತಂ ಗತ್ವಾ ಚಂಡಾಲಗೃಹಮಾವಿಶೇತ್' ಅಶನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ ಸಂಚರಂತಿ ಮಹಾಘೋರೇ ನರಕೇ ಕಾಲಮಕ್ಷಯಂ' ಇಂತೆಂದುದಾಗಿ, ಅನ್ಯದೈವ ಭವಿವುಳ್ಳನಕ, ನೀವು ಲಿಂಗವಂತರೆಂದಿರೋ, ಮರುಳುಗಳಿರಾ? ಇದನರಿತು ಭಕ್ತಿಪಥವ ಸೇರದಿರ್ದಡೆ, ನೀವೆಂದೆಂದಿಗೂ ಭವಭವದ ಲೆಂಕರು. ಇದು ಕಾರಣ, ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಲಿಂಗ ಮುನ್ನವೇ ದೂರವಯ್ಯ.