Index   ವಚನ - 257    Search  
 
ಲಿಂಗವೆಂಬುದು ಪರಶಕ್ತಿಯುತ ಪರಶಿವನ ನಿಜದೇಹ, ಲಿಂಗವೆಂಬುದು ಪರಶಿವನ ಘನತೇಜ, ಲಿಂಗವೆಂಬುದು ಪರಶಿವನ ನಿರತಿಶಯಾನಂದಸುಖವು, ಲಿಂಗವೆಂಬುದು ಪರಶಿವನ ಪರಮಜ್ಞಾನ, ಲಿಂಗವೆಂಬುದು ಷಡಧ್ವಮಯ ಜಗಜ್ಜನ್ಮಭೂಮಿ, ಲಿಂಗವೆಂಬುದು ಅಖಂಡಿತವೇದ ಪಂಚಸಂಜ್ಞೆ, ಲಿಂಗವೆಂಬುದು ತಾ ಹರಿಬ್ರಹ್ಮರ ನಡುಮನೆಗಳ ಜ್ಯೋತಿರ್ಲಿಂಗ, ಅಖಿಲಾರ್ಣವಾ ಲಯಾನಾಂ ಲಿಂಗಂ ಮುಖ್ಯಂ ಪರಂ ತಥಾ| ಪರಂ ಗೂಢಂ ಶರೀರಸ್ಥಂ ಲಿಂಗಕ್ಷೇತ್ರಮನಾದಿವತ್|| ಯದಾದ್ಯಮೈಶ್ವರಂ ತೇಜಸ್ತಲ್ಲಿಂಗಂ ಪಂಚಸಂಜ್ಞಕಂ| ಎಂದಿದು ಲಿಂಗದ ಮರ್ಮ. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ. ಲಿಂಗದೊಳಿದ ತಿಳಿಯಬಲ್ಲವನೇ ಬಲ್ಲವನು.