Index   ವಚನ - 299    Search  
 
ಶಿವ ಶಿವ! ಮಹಾದೇವ, ಎನ್ನ ಗುಣಾವಗುಣವರಿಯದೆ ಇದಿರ ಗುಣವ ವಿಚಾರಿಸುವೆ. ಅವರು ವಂಚಿಸಿಹರೆಂದು ಕೊಡರೆಂದು ನಿಂದಿಸಿಹರೆಂದು ಮಾತಾಪಿತ ಸತಿಸುತರುಗಳಿಗೆ ಸ್ನೇಹಿಸಿಹರೆಂದು ಶಿವ ಶಿವಾ! ಬುದ್ಧಿಯನರಿಯದೆ ನಾ ನಿಮಗೆ ವಂಚನೆಯಿಲ್ಲದೆ ಒಲಿದೆನಾದಡೆ ನೀವೆನಗೆ ಒಳ್ಳಿದರು. `ಸತ್ಯಭಾವಿ ಮಹತ್ಸತ್ಯಂ' ಎಂಬುದಾಗಿ, ನಿಮ್ಮಡಿಗಳ ಸ್ನೇಹಿತರು, ಎನಗೆ ಒಳ್ಳಿದರು. ಸ್ನೇಹ ತಾತ್ಪರ್ಯವ ಮಾಡಿ ಬೇಡಿತ್ತನಿತ್ತು ದೇವಾ ಎನುತಿಪ್ಪರು. ಒಳ್ಳಿತ್ತು ಹೊಲ್ಲೆಹ ಎನ್ನಲ್ಲಿ, ಇದಿರಿಂಗೆ ಅದು ಸ್ವಭಾವ ಗುಣ. ಎನ್ನ ದುರ್ಗುಣಂಗಳ ಕಳದು ಸದ್ಗುಣವ ಮಾಡಿ ನಿನ್ನೊಳಗು ಮಾಡಿಕೊಳ್ಳಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.