ವಚನ - 327     
 
ಶೀಲಶೀಲವೆಂಬ [ನೀಲಿಗ]ವಾರ್ತೆಯ ಬೇಳುವೆ, ಬಾಲರಾಳಿಯಂತೆ ಆಳಿಗೊಂಡಿತ್ತು. ಹೇಳಲಿಲ್ಲ ಕೇಳಲಿಲ್ಲದ ವಳಾವಳಿಯ ಬರಿಯ ಶಬ್ದ, ಬಯಲ ಹೋರಟೆ! ಅಂಗಸುಖಿಗಳಿಗೆ ಲಿಂಗವಿಲ್ಲಾಗಿ, ಗುಹೇಶ್ವರನೆಂಬ ಶೀಲವು ಸೀಮೆಯ ಮೀರಿ ಕಾಡಿತ್ತು.