Index   ವಚನ - 337    Search  
 
ಸದ್ಯೋಜಾತ ವಾಮದೇವ ತತ್ಪುರುಷ ಅಘೋರ ಈಶಾನ್ಯವೆಂಬ ಪಂಚಬ್ರಹ್ಮವೇ ಮೊದಲಾದ ಪಂಚಮುಖದ ರುದ್ರಾಕ್ಷಿ. ಆ ರುದ್ರಾಕ್ಷಿಯ ಹಸ್ತ ತೋಳು ಕರ್ಣ ಕಂಠ ಮಸ್ತಕದಲ್ಲಿ ಧರಿಸಿಪ್ಪ ಶಿವಭಕ್ತನೇ ರುದ್ರನು. ಆತನ ದರ್ಶನದಿಂದ ಭವರೋಗ ದುರಿತ ಇರಲಮ್ಮವು ನೋಡಾ. `ಓಂ ಅತ ಏವ ರುದ್ರಾಕ್ಷಧಾರಣಾತ್ ರುದ್ರಃ' ಎಂದುದಾಗಿ ರುದ್ರಪದವಿಯನೀವ ರುದ್ರಾಕ್ಷಿಯಂ ಧರಿಸಿಪ್ಪ ಭಕ್ತರಿಗೆ ಶರಣೆಂಬೆನಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.