Index   ವಚನ - 347    Search  
 
ಸೆಜ್ಜೆ ಶಿವದಾರ ವಸ್ತ್ರದಲ್ಲಿ ಹುದುಗಿಸಿ ಲಿಂಗವ ಧರಿಸಿಕೊಂಡು ಅಂಗಲಿಂಗಸಾಹಿತ್ಯವಾಗಿ, ಭಕ್ತರೆಂದು ಮಜ್ಜನಕ್ಕೆರೆವ ಭಂಗಿತರ ಮಾತ ಕೇಳಲಾಗದು, ಬಾಲನುಡಿ. ತನುಗುಣವಿರಹಿತವಾಗಿ ಮಜ್ಜನಕ್ಕೆರೆಯಲರಿಯರಾಗಿ ಭಕ್ತರೆನ್ನೆ. ಮನವೇ ಸೆಜ್ಜೆ, ನೆನಹೇ ಶಿವದಾರವಾಗಿ, ಸಮತೆಯೇ ಲಿಂಗವಾಗಿ ತನ್ನ ಮರೆದು ಮಜ್ಜನಕ್ಕೆರೆವರ ಭಕ್ತರೆಂಬೆನಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.