ವಚನ - 339     
 
ಬಿರುಗಾಳಿ ಬೀಸಿ ಮರ ಮುರಿವಂತಹ ಸುಳುಹ ಸುಳಿಯದೆ, ತಂಗಾಳಿ ಪರಿಮಳದೊಡಗೂಡಿ ಸುಳಿವಂತೆ ಸುಳಿಯಬೇಕು. ಸುಳಿದಡೆ ನೆಟ್ಟನೆ ಜಂಗಮವಾಗಿ ಸುಳಿಯಬೇಕು. ನಿಂದಡೆ ನೆಟ್ಟನೆ ಭಕ್ತನಾಗಿ ನಿಲ್ಲಬೇಕು. ಸುಳಿದು ಜಂಗಮವಾಗಲರಿಯದ, ನಿಂದು ಭಕ್ತನಾಗಲರಿಯದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಾ?