ವಚನ - 35     
 
ಕಡಲ ನುಂಗಿದ ಕಪ್ಪಿನ ಪರಿಭವ ನವಸಾಸಿರ! ಸಿಡಿಲು ಹೊಯ್ದ ಬಯಲಿಂಗೆ ಬಣ್ಣವುಂಟೆ? ಕಂಗಳ ಮುಂದಣ ಕನಸು ಹಿಂಗಿದ ತುಂಬಿಯ ಪರಿಮಳ! ಅಂಗವಿಲ್ಲದ ರೂಹಿಂಗೆ ಸಂಗವುಂಟೆ? ಇದೇನೋ! ಗಗನದ ಹಣ್ಣನೆ ಕೊಯ್ದು, ಮುಗುದೆ ರುಚಿಯನರಿಯಳು! ಹಗರಣದ ಅಮ್ಮಾವಿನ ಹಯನು ಸಯವಪ್ಪುದೆ ಗುಹೇಶ್ವರಾ?