Index   ವಚನ - 356    Search  
 
ಅಂಗಜೀವಿಗಳೆಲ್ಲಾ ಅಶನಕ್ಕೆ ನೆರೆದು, ಲಿಂಗವಾರ್ತೆಯ ನುಡಿವರಯ್ಯಾ. ಕಾಯಜೀವಿಗಳೆಲ್ಲಾ ಕಳವಳಿಸಿ ನುಡಿವರಯ್ಯಾ. ಮನಬಂದ ಪರಿಯಲ್ಲಿ ನುಡಿವಿರಿ, ಗುಹೇಶ್ವರಲಿಂಗ ನಿಮಗೆಲ್ಲಿಯದೊ?