Index   ವಚನ - 3    Search  
 
ಅಂಗವ ಅಂದ ಮಾಡಿಕೊಂಡು ತಿರುಗುವ ಭಂಗಗೇಡಿಗಳು ನೀವು ಕೇಳಿರೋ. ಅಂಗಕ್ಕೆ ಅಂದವಾವುದೆಂದರೆ: ಗುರುವಿಗೆ ತನುವ ಕೊಟ್ಟಿರುವುದೆ ಚೆಂದ, ಲಿಂಗಕ್ಕೆ ಮನವ ಕೊಟ್ಟಿರುವುದೆ ಚೆಂದ, ಜಂಗಮಕ್ಕೆ ಧನವ ಕೊಟ್ಟಿರುವುದೆ ಚೆಂದ. ಅಷ್ಟಾವರಣದಲ್ಲಿ ನಿಬ್ಬೆರಗಿನಿಂದ ಕೂಡಿ ಭಕ್ತಿಯೆಂಬ ಸಮುದ್ರದಲ್ಲಿ ಈಸಾಡುವುದೆ ಚೆಂದ. ಶಿವನ ಪಾದವ ಹೊಂದುವುದೆ ಚೆಂದ. ಈ ಮಾರ್ಗವ ಬಿಟ್ಟು, ಸಂಸಾರವೇ ಅಧಿಕವೆಂದು ತನ್ನ ಹೆಂಡಿರು ಮಕ್ಕಳು ಸಂಪತ್ತು ಇವು [ತ]ನಗೆ ಶಾಶ್ವತವೆಂದು ತಿಳಿದು, ಒಂದು ಕಾಸನಾದರೂ ಪರರಿಗೆ ಕೊಡದೆ, ತಾನೇ ತಿಂದು, ನೆಲದಲ್ಲಿ ಮಡಗಿ,ಕಡೆಗೆ ಯಮನ ಕೈಯಲಿ ಸಿಲ್ಕಿ ನರಕ ಕೊಂಡದಲ್ಲಿ ಮುಳುಗೇಳುವುದೇ ನಿಶ್ಚಯ. ಇಂತಹ ಅಂದಗೇಡಿಗಳ ಮುಖವ ನೋಡಲಾಗದೆಂದಾತ, ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.