ವಚನ - 376     
 
ನಿಮ್ಮಲ್ಲಿ ನೀವು ತಿಳಿದು ನೋಡಿದರೆ: ಅನ್ಯವಿಲ್ಲ ಕಾಣಿರಣ್ಣಾ. ಅರಿವು ನಿಮ್ಮಲ್ಲಿಯೆ ತದ್ಗತವಾಗಿಯದೆ. ಅನ್ಯಭಾವವ ನೆನೆಯದೆ ತನ್ನೊಳಗೆ ತಾನೆಚ್ಚರಬಲ್ಲಡೆ ತನ್ನಲ್ಲಿಯೆ ತನ್ಮಯವು ಗುಹೇಶ್ವರಲಿಂಗವು.