Index   ವಚನ - 39    Search  
 
ಆದಿಶಕ್ತಿವಿಡಿದಾಡುವರೆಲ್ಲರು ಜಂಗಮವಲ್ಲ, ಅನಾದಿಶಕ್ತಿವಿಡಿದಾಡುವರೆಲ್ಲರು ಜ್ಞಾನಿಗಳಲ್ಲ, ಆದಿ ಅನಾದಿಯೆಂಬೀ ಎರಡ ಭೇದಿಸಿ ದಾಂಟಿ, ಇಚ್ಛಾಶಕ್ತಿಯ ಇಚ್ಛೆಯ ಮರೆದು, ಕ್ರಿಯಾಶಕ್ತಿಯ ಭಾವವ ಬಿಟ್ಟು, ಜ್ಞಾನಶಕ್ತಿಯ ಠಾವವನೊಲ್ಲದೆ, ತಾನು ತಾನಾದವಂಗೆ ಏನೂ ಇದಿರಿಲ್ಲಾ, ಎಂದನಂಬಿಗರ ಚೌಡಯ್ಯ.