Index   ವಚನ - 42    Search  
 
ಆರಿಕೆ ಬಿತ್ತಿದ ಗಿಡುವಿನ ಹೂವ ಕೊಯಿದು, ಊರೆಲ್ಲರೂ ಕಟ್ಟಿಸಿದ ಕೆರೆಯ ನೀರ ತಂದು, ನಾಡೆಲ್ಲರೂ ನೋಡಿಯೆಂದು ಪೂಜಿಸುತ್ತ, ಪೂಜಿಸಿದ ಪುಣ್ಯ ಹೂವಿಗೋ? ನೀರಿಗೋ? ನಾಡೆಲ್ಲಕ್ಕೊ? ಪೂಜಿಸಿದಾತಗೋ? ಇದ ನಾನರಿಯೆ, ನೀ ಹೇಳೆಂದನಂಬಿಗರ ಚೌಡಯ್ಯ.