Index   ವಚನ - 47    Search  
 
ಆವಾವ ತ್ರಿಗುಣಭೇದದಲ್ಲಿ ವಿಶ್ವಾಸವ ಮಾಡಿದಡೂ ಭಾವಶುದ್ಧವಾಗಿರಬೇಕು. ಯೋಗಿಯಾದಲ್ಲಿ ದೇಹಧರ್ಮವ ಮರೆದು, ಭೋಗಿಯಾದಲ್ಲಿ ಸಂಚಿತವ ಮರೆದು, ತ್ಯಾಗಿಯಾದಲ್ಲಿ ನೆನಹು ಹಿಂಚು ಕೊಡುವುದು ಮುಂಚಾಗಿರಬೇಕು. ಇಂತೀ ಯೋಗಿ ಭೋಗಿ ತ್ಯಾಗಿ, ಇಂತೀ ತ್ರಿವಿಧವನೊಳಕೊಂಡು ವಿರಕ್ತನಾದಲ್ಲಿ ಆತನ ಅಡಿಗೆರಗುವೆನೆಂದನಂಬಿಗರ ಚೌಡಯ್ಯ.