Index   ವಚನ - 53    Search  
 
ಈಶ್ವರನ ಕಾಬುದೊಂದಾಸೆಯುಳ್ಳೊಡೆ ಪರದೇಶಕ್ಕೆ ಹೋಗಿ ಬಳಲದಿರು, ಕಾಶಿಯಲ್ಲಿ ಕಾಯವ ವಿನಾಶವ ಮಾಡಲುಬೇಡ. ನಿನ್ನಲ್ಲಿ ನೀ ತಿಳಿದು ನೋಡಾ,ಸರ್ವೇಶ ಮುಳ್ಳಗುತ್ತ ತೆರಹಿಲ್ಲೆಂದಡೆ, ಒಂದು ಗೋಂಟ ಸಾರಿರ್ದನೆ? ಎಂದನಂಬಿಗರ ಚೌಡಯ್ಯ.