ವಚನ - 378     
 
ಇಲ್ಲವೆಯ ಮೇಲೊಂದು ಉಂಟೆಂಬ ಪರಿಭಾವ, ಅಲ್ಲಿ ಇಲ್ಲಿ ಎನ್ನದೆ ತಾನೆ ನಿಂದಿತ್ತು ನೋಡಾ! ತನ್ನಲ್ಲಿಯ ಪ್ರಕೃತಿಯ ತಾನೆ ಹಿಂಗಿಸಲು, ಅಲ್ಲಿಯೆ ಜ್ಞಾನ ಉದಯಿಸಿತ್ತು! ಎಲ್ಲಾ ಎಡೆಯಲ್ಲಿ ನಿಂದ ನಿಜಪದವ ಗುಹೇಶ್ವರಾ ನಿಮ್ಮ ಶರಣ ಬಲ್ಲ.