Index   ವಚನ - 59    Search  
 
ಎತ್ತ ಸುತ್ತಿ ಬಂದಡೂ ಊರಿಗೆ ಬಪ್ಪುದು ತಪ್ಪದು. ಹಲವು ಮಾತನಾಡಿದಡೇನು? ಮೂರು ಮಲವ ಮರೆದಿರಬೇಕು. ಹೊಲಬುದಪ್ಪಿದ ಮೃಗ ಬಲೆಯೊಳಗೆ ಬಿದ್ದಂತಾಗಬೇಡ. ಇದನರಿತು ಬದುಕೆಂದನಂಬಿಗರ ಚೌಡಯ್ಯ.