Index   ವಚನ - 82    Search  
 
ಕಟ್ಟಿಹೆ ಬಿಟ್ಟಿಹೆನೆಂಬ ದಂದುಗನಿಮಗೇಕೆ? ತೆರನನರಿಯದೆ ಹಲವು ತಪ್ಪಲ ತರಿ ತಂದುಮೇಲೊಟ್ಟಲೇಕೆ? ಜಂಗಮ ಬಂದರೆ ತೆರನರಿತು ಅರ್ಪಿಸಬಲ್ಲಡಲ್ಲಿ ತಾನೆ ಶಿವನು ತೆರಹಿಲ್ಲದಿಪ್ಪನೆಂದಾತ ನಮ್ಮಂಬಿಗರ ಚೌಡಯ್ಯ.