Index   ವಚನ - 84    Search  
 
ಕರದಲ್ಲಿ ಲಿಂಗವ ಪಿಡಿದುಕೊಂಡು, ಕಣ್ಣುಮುಚ್ಚಿ ಸರಜಪಮಾಲೆಯ ಬೆರಳಿಂದ ಎಳೆದೆಳೆದು ಎಣಿಸುತ್ತ, ಗುರುಮೂರ್ತಿಯ ಧ್ಯಾನಿಸುತ್ತ ಕಂಡೆನೆಂಬುತ್ತಇರುವರೆ ಮೂಳರಿರಾ? ನಿಮಗೆಲ್ಲಿಯದೊ ಗುರುಧ್ಯಾನ? ವರ ಪರವಸ್ತುವಿಂಗೆ ಸರಿ ಎನಿಸಿಕೊಂಬ ಗುರುಸ್ವಾಮಿ ನಿಮ್ಮ ನೆರೆಹೊರೆಯ ಸರಿಸಮೀಪ ಗ್ರಾಮದಲ್ಲಿರಲು ಅವರನ್ನು ಲೆಕ್ಕಿಸದೆ, ಉದಾಸೀನವ ಮಾಡಿ ಕಂಡು, ನಿನ್ನ ಉಂಬ ಉಡುವ ಸಿರಿ ಸಂಪತ್ತಿನೊಳು ಅವರನು ಸತ್ಕರಿಸದೆ, ಕರದಲ್ಲಿ ನೋಡಿ ಕಂಡಿಹೆನೆಂದು, ಶಿರವಂ ಬಿಗಿದು, ಕಣ್ಣನೆ ತೆರೆಯದೆ, ಸ್ವರದಲಾಗ ಪಿಟಿಪಿಟಿ ಎನ್ನುತ್ತ ಅರಿದೆವೆಂಬ ಅರಿವಿಂಗೆ ಶಿರದೂಗಿ ಬೆರಗಾಗಿ ನಗುತಿರ್ದ ನಮ್ಮ ಅಂಬಿಗರ ಚೌಡಯ್ಯ.