Index   ವಚನ - 87    Search  
 
ಕಲ್ಲದೇವರ ಪೂಜೆಯ ಮಾಡಿ,ಕಲಿಯುಗ[ದಿ] ಕತ್ತೆಗಳಾಗಿ ಹುಟ್ಟಿದರು. ಮಣ್ಣದೇವರ ಪೂಜಿಸಿ ಮಾನಹೀನರಾದರು. ಮರನ ದೇವರೆಂದು ಪೂಜಿಸಿ ಮಣ್ಣ ಕೂಡಿದರು. [ಇಂತಪ್ಪ] ದೇವರ ಪೂಜಿಸಿ ಸ್ವರ್ಗಕ್ಕೇರದೆ ಹೋದರು! ಜಗದ್ಭರಿತವಾದ ಪರಶಿವನೊಳಗೆ ಕಿಂಕರನಾದ ಶಿವಭಕ್ತನೆ ಶ್ರೇಷ್ಠನೆಂದಾತ ನಮ್ಮ ಅಂಬಿಗರ ಚೌಡಯ್ಯ.