ವಚನ - 381     
 
ಭವಿಯ ಕಳೆದೆವೆಂಬ ಮರುಳು ಜನಂಗಳು ನೀವು ಕೇಳಿರೆ; ಭವಿಯಲ್ಲವೆ ನಿಮ್ಮ ತನುಗುಣಾದಿಗಳು? ಭವಿಯಲ್ಲವೆ ನಿಮ್ಮ ಮನಗುಣಾದಿಗಳು? ಭವಿಯಲ್ಲವೆ ನಿಮ್ಮ ಪ್ರಾಣಗುಣಾದಿಗಳು? ಇವರೆಲ್ಲರೂ ಭವಿಯ ಹಿಡಿದು ಭವಭಾರಿಗಳಾದರು. ನಾನು ಭವಿಯ ಪೂಜಿಸಿ ಭವಂನಾಸ್ತಿಯಾದೆನು ಗುಹೇಶ್ವರಾ.