Index   ವಚನ - 103    Search  
 
ಕುಡಿವ ನೀರೆನ್ನಬಹುದೆ, ಹುಡುಕುನೀರಲದ್ದುವಾಗ? ಅಡುವ ಕಿಚ್ಚೆನ್ನಬಹುದೆ, ಮನೆಯ ಸುಡುವಾಗ? ಒಡಲು ತನ್ನದೆನ್ನಬಹುದೆ, ಪುಣ್ಯ-ಪಾಪವನುಂಬಾಗ? ಒಡಲಜೀವವೆನ್ನಬಹುದೆ, ಇಕ್ಕಿ ಹೋಹಾಗ? ಇವನೊಡೆಬಡಿದು ಕಳೆಯೆಂದಾತನಂಬಿಗರ ಚೌಡಯ್ಯ.