Index   ವಚನ - 104    Search  
 
ಕುರಿಕೋಳಿ ಕಿರುಮೀನ ತಿಂಬವರ ಊರೊಳಗೆ ಇರು ಎಂಬರು. ಅಮೃತಾನ್ನವ ಕರೆವ ಗೋವ ತಿಂಬವರ ಊರಿಂದ ಹೊರಗಿರು ಎಂಬರು. ಆ ತನು ಹರಿಗೋಲಾಯಿತ್ತು, ಬೊಕ್ಕಣ, ಸಿದಿಕೆ, ಬಾರುಕೋಲು, ಪಾದರಕ್ಷೆ, ದೇವರ ಮುಂದೆ ಬಾರಿಸುವುದಕ್ಕೆ ಮದ್ದಳೆಯಾಯಿತ್ತು. ಈ ಸಿದ್ಧಲಿಕೆಯೊಳಗಣ ತುಪ್ಪವ ಶುದ್ಧಮಾಡಿ ತಿಂಬ ಗುಜ್ಜ ಹೊಲೆಯರ ಕಂಡಡೆ ಉದ್ದನ ಚಮ್ಮಾಳಿಗೆಯ ತೆಕ್ಕೊಂಡು ಬಾಯ ಕೊ[ಯ್ಯು]ವೆನು ಎಂದಾತ ನಮ್ಮ ಅಂಬಿಗರ ಚೌಡಯ್ಯ.