Index   ವಚನ - 108    Search  
 
ಕುಲಹೀನ ಶಿಷ್ಯಂಗೆ ಅನುಗ್ರಹವ ಮಾಡಿ, ತಿರುಗಿ ಅವನ ಮನೆಯಲ್ಲಿ ಉಣ್ಣಬಾರದೆಂದು ಅಕ್ಕಿ ಕಣಕವ ಕೊಂಡುಹೋಗುವ ಗುರುವಿನ ಕಂಡರೆ, ಕೆಡವಿ ಹಾಕಿ ಮೂಗನೆ ಕೊಯ್ಧುಇಟ್ಟಂಗಿಯ ಕಲ್ಲಿಲೆ ತಿಕ್ಕಿ ಸಾಸಿವೆಯ ಹಿಟ್ಟನೆ ತಳಿದು ಮೇಲೆ ಲಿಂಬಿಯ ಹುಳಿಯನೆ ಹಿಂಡಿ ಪಡುವ ಗಾಳಿಗೆ ಹಿಡಿಯೆಂದಾತ ನಮ್ಮ ಅಂಬಿಗರ ಚೌಡಯ್ಯ.