Index   ವಚನ - 113    Search  
 
ಕೈ ಮುಟ್ಟುವಲ್ಲಿ, ಕಿವಿ ಕೇಳುವಲ್ಲಿ, ಬಾಯಿ ಕೊಂಬಲ್ಲಿ, ಮೂಗು ವಾಸಿಸುವಲ್ಲಿ, ಕಣ್ಣು ನೋಡುವಲ್ಲಿ- ಇಂತೀ ಐಯಿದರ ಗುಣ ಎಡೆಯಾಟ ಅದಾರಿಂದ ಎಂಬುದ ತಾ ವಿಚಾರಿಸಿದಲ್ಲಿ, ಪಂಚಕ್ರೀಯಲ್ಲಿ ಸಂಚಿತ ಪ್ರಾರಬ್ಧ ಆಗಾಮಿಯೆಂಬ ಹಿಂಚುಮುಂಚಿಗೆ ಸಿಕ್ಕದೆ, ಕುಡಿವೆಳಗಿನ ಮಿಂಚಿನ ಸಂಚದಂತಿರಬೇಕೆಂದನಂಬಿಗರ ಚೌಡಯ್ಯ.