Index   ವಚನ - 116    Search  
 
ಕ್ಷೀರದಿಂದಾದ ತುಪ್ಪ ಕ್ಷೀರವಪ್ಪುದೇ? ನೀರಿನಿಂದಾದ ಮುತ್ತು ನೀರಪ್ಪುದೇ? ವಿೂರಿ ಪೂರ್ವಕರ್ಮವನು ಹರಿದ ಭಕ್ತಗೆ ಬೇರೆ ಮತ್ತೆ ಜನ್ಮವುಂಟೆ ಲಿಂಗವಲ್ಲದೆ? ಕಟ್ಟಿಹೆ ಬಿಟ್ಟಿಹೆವೆಂಬ ದಂದುಗ ನಿಮಗೇಕೆ? ತೆರನನರಿಯದೆ ಹಲವು ತೊಪ್ಪಲ ತರಿತಂದು ಮೇಲೊಟ್ಟಲೇಕೊ? ಜಂಗಮ ಬಂದರೆ ತೆರನರಿತು ಅರ್ಪಿಸಬಲ್ಲಡಲ್ಲಿ ಶಿವ ತೆರಹಿಲ್ಲದಿಪ್ಪನೆಂದಾತನಂಬಿಗರ ಚೌಡಯ್ಯ.