Index   ವಚನ - 153    Search  
 
ದೇಹಾರವ ಮಾಡುವಣ್ಣಗಳಿರಾ, ಒಂದು ತುತ್ತು ಆಹಾರವನಿಕ್ಕಿರೆ. ದೇಹಾರಕ್ಕೆ ಆಹಾರವೆ ನಿಚ್ಚಣಿಗೆ. ದೇಹಾರವ ಮಾಡುತ್ತ ಆಹಾರವನಿಕ್ಕದಿರ್ದಡೆ, ಆ ಹರನಿಲ್ಲೆಂದನಂಬಿಗರ ಚೌಡಯ್ಯ.