Index   ವಚನ - 155    Search  
 
[ನಂಬಿಯಣ್ಣ] ಮಾಡುವ ಭಕ್ತಿ ನಾಡೆಲ್ಲ ಮಾಡಬಹುದಯ್ಯಾ, ಕುಂಭಾರಗುಂಡಯ್ಯ ಮಾಡುವ ಭಕ್ತಿ ಊರೆಲ್ಲಾ ಮಾಡಬಹುದಯ್ಯಾ, ಬಸವಣ್ಣ ಮಾಡುವ ಭಕ್ತಿ ಶಿಶುವೆಲ್ಲಾ ಮಾಡಬಹುದಯ್ಯಾ, ಇದೇನು ದೊಡ್ಡಿತ್ತೆಂಬರು. ಸರ್ವರಿಗೆ ವಶವಾಗದ ಭಕ್ತಿ ಅವರ ಮನ-ಜ್ಞಾನದಂತೆ ಇರಲಿ ಶರಣಾರ್ಥಿ. ಈ ಸುಧೆಯೊಳಗೆ ಶುದ್ಧಭಕ್ತಿಯನರಿತು ನಡೆದುದು ಬಟ್ಟೆಯಾಗದೆ? ನುಡಿದುದು ಸಿದ್ಧಿಯಾಗದೆ? ದೇಹಕ್ಕೆ ಕಷ್ಟ-ನಷ್ಟ, ರೋಗ-ರುಜೆಗಳು ಬಂದು ಅಟ್ಟಿ ಮುಟ್ಟಿದವಾಗಿ, ದೃಢವಾಗಿದ್ದು ಶರಣನ ಮನವು ನಿಶ್ಚಯಿಸಿ, ದೃಢಶೀಲಂಗಳಂ ಬಿಡದೆ ನಡೆವಾತದೊಡ್ಡ ಭಕ್ತನೆಂದಾತ ನಮ್ಮ ಅಂಬಿಗರ ಚೌಡಯ್ಯ.