Index   ವಚನ - 171    Search  
 
ನೇಮಸ್ಥನೇನು ಬಲ್ಲನಯ್ಯ ಲಿಂಗದ ಕುರುಹ? ಸೂಳೆಯ ಮಗನೇನು ಬಲ್ಲನಯ್ಯ ತಂದೆಯ ಕುರುಹ? ಜಂಗಮದ ಅನುವ ತೊತ್ತಿನ ಮಗನೇನು ಬಲ್ಲನಯ್ಯ? ಇಂತಪ್ಪ ಅಂಗವೇ ಲಿಂಗ, ಲಿಂಗವೇ ಅಂಗ, ಲಿಂಗವೇ ಜಂಗಮವು, ಜಂಗಮವೇ ಲಿಂಗವೆಂದರಿಯದವನ ಭಕ್ತರೆಂದರೆ ಅಘೋರನರಕವೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.