Index   ವಚನ - 212    Search  
 
ಮಸ್ತಕದಲ್ಲಿ ರುದ್ರಾಕ್ಷಿಯಂ ಧರಿಸಿ ಅನ್ಯದೈವದ ಗುಡಿಯ ಹೋಗಲಾಗದು ಶರಣ. ಕರಣಂಗಳಲ್ಲಿ ರುದ್ರಾಕ್ಷಿಯಂ ಧರಿಸಿ ಹರನಿಂದೆ ಗುರುನಿಂದೆಯ ಕೇಳಲಾಗದು ಶರಣ. ತೋಳುಗಳಲ್ಲಿ ರುದ್ರಾಕ್ಷಿಯಂ ಧರಿಸಿ ಪರಸತಿಯನಪ್ಪಲಾಗದು ಶರಣ. ಮುಂಗೈಯಲ್ಲಿ ರುದ್ರಾಕ್ಷಿಯಂ ಧರಿಸಿ ಅನ್ಯರಿಗೆ ಕೈಮುಗಿಯಲಾಗದು ಶರಣ. ಇದನರಿದು ಧರಿಸಿದಡೆ ಶ್ರೀರುದ್ರಾಕ್ಷಿಯಹುದು. ಅಂತಲ್ಲದಿರ್ದಡೆ, [ಡಂ]ಬ ಹಗರಣವ ಹೊತ್ತು ಬಂದಂತೆ ಎಂದಾತನಂಬಿಗರ ಚೌಡಯ್ಯ.