Index   ವಚನ - 217    Search  
 
ಮಾತುಗಂಟಿತನದಿಂದ ಎಷ್ಟು ಮಾತನಾಡಿದಡೇನು? ಕಾಮಿನಿಯರ ಕಾಲದೆಸೆ ಸಿಕ್ಕಿ, ಕ್ರೋಧದ ದಳ್ಳುರಿಯಲ್ಲಿ ಬೆಂದು, ಆಸೆಯೆಂಬ ಪಾಶ ಕೊರಳಲ್ಲಿ ಸುತ್ತಿ, ಅದೇಕೊ, ಅದೇತರ ಮಾತೆಂದನಂಬಿಗರ ಚೌಡಯ್ಯ.