Index   ವಚನ - 223    Search  
 
ಮೊಟ್ಟೆ ಮೊಟ್ಟೆ ಪತ್ರೆಯ ತಂದು ಒಟ್ಟಿ, ಪೂಜಿಸಿದ[ಡೇ]ನು ಮನಶುದ್ಧವಿಲ್ಲದನ್ನಕ್ಕರ? ಮನಮಗ್ನವಾಗಿ ಶಿವಧ್ಯಾನದಲ್ಲಿ ಕೂಡಿ, ಒಂದೇ ದಳವ ಧರಿಸಿದರೆ ಶಿವನು ಒಲಿಯನೆ? ಇಂತು ಪೂಜೆಯ ಮಾಡುವುದಕ್ಕಿಂತಲು ಅದೇ ತೊಪ್ಪಲನು ಕುದಿಸಿ ಪಾಕವ ಮಾಡಿದಲ್ಲಿ ಆ ಲಿಂಗವು ತೃಪ್ತಿಯಾಯಿತ್ತು. ಬರಿದೆ ಲಿಂಗವ ಪೂಜಿಸಿ ಜಂಗಮಕ್ಕೆ ಅನ್ನವ ಕೊಡದೆ, ಲಿಂಗದ ಮುಖವು ಜಂಗಮವು ಎಂದು ತಿಳಿಯದೆ, ತನು-ಮನ-ಧನವನು ಗುರು-ಲಿಂಗ-ಜಂಗಮಕ್ಕೆ ಸವೆಸದೆ, ಬಾಗಿಲಿಗೆ ಕಾವಲಿಕ್ಕಿ, ಹೆಂಡಿರು ಮಕ್ಕಳು ಕೂಡಿಕೊಂಡು, ತನ್ನ ತಾನೇ ತಿಂಬುವಂಥ ನೀಚ ಹೊಲೆಯರ ಮೂಗ ಸವರಿ ಮೆಣಸಿನ ಹಿಟ್ಟು ತುಪ್ಪವ ತುಂಬಿ, ಪಡಿಹಾರಿ ಉತ್ತಣ್ಣಗಳ ಪಾದುಕೆಯಿಂದ ಹೊಡಿ ಎಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.